ಅನ್ನಭಾಗ್ಯ’ ಯೋಜನೆಯಡಿ ತಲಾ 5 ಕೆಜಿ ಅಕ್ಕಿ ಜತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ನೀಡುವ ಬದಲಿಗೆ ನಗದು ಪಾವತಿಸುವ ಹಾಲಿ ವ್ಯವಸ್ಥೆಯನ್ನೇ ಮುಂದುವರಿಸಲು ಸಂಪುಟ ಸಭೆ ನಿರ್ಧರಿಸಿತು.ರಾಜ್ಯಾದ್ಯಂತ 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ 400.24 ಕೋಟಿ ರೂ. ವೆಚ್ಚದಲ್ಲಿ ಮಲತ್ಯಾಜ್ಯ ಸಂಸ್ಕರಣಾ ಸ್ಥಾವರ ಸ್ಥಾಪನೆ ಮಾಡುವ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ.
‘ ಎನ್ಜಿಟಿ ನಿರ್ದೇಶನದಂತೆ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಮೊದಲ ಹಂತದಲ್ಲಿ 110
ಪೌರಸಂಸ್ಥೆಗಳಲ್ಲಿಅನುಷ್ಠಾನಗೊಳ್ಳಲಿದೆ. ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ಒಟ್ಟು 4 ಟೆಂಡರ್ ಪ್ಯಾಕೇಜ್ ಮೂಲಕ ಯೋಜನೆ ಜಾರಿಗೆ ಸಂಪುಟ ನಿರ್ಣಯಿಸಿತು’ ಎಂದು ಸಭೆ ಬಳಿಕ ಕಾನೂನು ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
0 Comments