ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗ್ರಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆಗೆ ದಿನಗಡನೆ ಆರಂಭವಾಗಿದೆ. ಇದೇ ಮಹಾನವಮಿ ಅಥವಾ ವಿಜಯದಶಮಿ ಹಬ್ಬದ ದಿನದಂದು ಎರಡನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ. ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ನವಶಕ್ತಿ ಸಂಭ್ರಮದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.
ಮೊದಲ ಕಂತಿನ ಹಣ: ಕಳೆದ ಆಗಸ್ಟ್ 30ರಂದು ಯೋಜನೆಗೆ ಚಾಲನೆ ಸಿಕ್ಕಿದ್ದು ಅದೇ ದಿನವೇ ಫಲಾನುಭವಿಗಳ ಖಾತೆಗೆ ಮೊದಲನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು. ಸೆಪ್ಟೆಂಬರ್ ಒಂದರಂದು ಬಹುತೇಕರ ಖಾತೆಗಳಿಗೆ ಹಣ ಜಮೆ ಆಗಿತ್ತು ಮೊದಲ ಕಂತಿನಲ್ಲಿ 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2,169 ಕೋಟಿ ರೂಪಾಯಿ ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಈ ಹಣವನ್ನು ಈಗಾಗಲೇ ಬಹುತೇಕ ಮಹಿಳೆಯರು ಪಡೆದುಕೊಂಡಿದ್ದಾರೆ. ಹಣ ತಲುಪದೆ ಇರುವವರಿಗೆ ಎದುರಾಗಿರುವ ತಾಂತ್ರಿಕ ದೋಷ ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ. ಸಮಸ್ಯೆ ಬಗೆಹರಿದ ತಕ್ಷಣ ಇವರೆಗೂ ಹಣ ಸಂದಾಯವಾಗಲಿದೆ ಎಂದು ಈ ಹಿಂದೆ ಮಹಿಳಾ ಸಚಿವರು ಹೇಳಿದ್ದಾರೆ.
ಎರಡನೇ ಕಂತಿನ ಹಣ: ಇನ್ನು ಎರಡನೇ ಕಂತು ಸೆಪ್ಟೆಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2,280 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ಹಣ ವರ್ಗಾವಣೆಗೆ ಹಣಕಾಸು ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು; ವಿಜಯದಶಮಿ ಹೊತ್ತಿಗೆ ಖಾತೆಗೆ ಜಮಾ ಆಗಲಿದೆ ಎನ್ನಲಾಗುತ್ತಿದೆ. ಈ ನಡುವೆ ಎರಡು ಮತ್ತು ಮೂರನೇ ಕಂತಿನ ಹಣಕ್ಕಾಗಿ ಅಂದರೆ ಆಗಸ್ಟ್, ಸೆಪ್ಟೆಂಬರ್ ತಿಂಗಳ 4000 ಹಣ ಒಟ್ಟಿಗೆ ಜಮಾ ಆಗಲಿದ್ದು, ಇದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಯನ್ನು ಸರ್ಕಾರದ ಆರ್ಥಿಕ ಇಲಾಖೆ ಮಾಡಿಕೊಂಡಿದೆ.
ಒಟ್ಟು 4,449 ಕೋಟಿ ರೂಪಾಯಿ ಬಿಡುಗಡೆ: ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಮಾಸಿಕ 2,000 ರೂಪಾಯಿ ಸಹಾಯಧನ, ಈವರೆಗೆ 1.16 ಕೋಟಿ ಮಹಿಳೆಯರಿಗೆ ಅರ್ಜಿ ಸಲ್ಲಿಕೆ, 1.8 ಕೋಟಿ ಮಹಿಳೆಯರಿಗೆ ಹಣಜಮೆಯಾಗಿದ್ದು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಹಾಯಧನದ ಪಾವತಿಗಾಗಿ ಒಟ್ಟು 4,449 ಕೋಟಿ ಹಣ ಬಿಡುಗಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಹೀಗಾಗಿ ಈ ವಾರದೊಳಗೆ ನಿಮ್ಮ ಖಾತೆಗೆ ಹಣ ಸೇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ನವಶಕ್ತಿ ಸಂಭ್ರಮ ಸಂದೇಶ: ಕುಟುಂಬ ನಿರ್ವಹಣೆಯ ಹೊಣೆ ಹೊತ್ತ ಮನೆಯ ಯಜಮಾನಿಯರು ನಿತ್ಯ ಎದುರಿಸುವ ಸವಾಲುಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಉದ್ದೇಶದಿಂದ ನಮ್ಮ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2000 ಧನಸಹಾಯ ನೀಡಲಾಗುತ್ತಿದೆ. ರಾಜ್ಯದ 1.8 ಕೋಟಿ ಮಹಿಳೆಯರಿಗೆ ಈಗಾಗಲೇ ಎರಡು ತಿಂಗಳ ಹಣ ಜಮೆಯಾಗಿದ್ದು ಈ ಉದ್ದೇಶಕ್ಕಾಗಿ ಸರ್ಕಾರ ರೂಪಾಯಿ 4,449 ಕೋಟಿ ಅನುದಾನ ಬಳಕೆ ಮಾಡಿದೆ.
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗಾಗಿ 70.427 ಕೋಟಿ ರೂಪಾಯಿ ಮೀಸಲಿಟ್ಟು, ಸ್ತ್ರೀ ಸಬಲೀಕರಣದ ನಿಟ್ಟಿನಲ್ಲಿ ನವಯುಗಕ್ಕೆ ನಾಡಿ ಹಾಡಿದ್ದೇವೆ. ಸ್ತ್ರೀಶಕ್ತಿ ಆರಾಧನೆಯ ಈ ನವರಾತ್ರಿ ಹಬ್ಬದ ಸಂದರ್ಭದಲ್ಲಿ ನಮ್ಮ ಸರ್ಕಾರವು ಸ್ತ್ರೀ ಸಬಲೀಕರಣಕ್ಕೆ ಬದ್ಧವಾಗಿ ಶ್ರಮಿಸುತ್ತಿದೆ ಎಂದು ಹೆಮ್ಮೆಯಿಂದ ಹೇಳಬಯಸುತ್ತೇನೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.
ಹಣ ಬಾರದವರು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಿ: ಗೃಹಲಕ್ಷ್ಮಿ ಯೋಜನೆಯಡಿ ಹಲವರು ಬ್ಯಾಂಕ್ ಖಾತೆಗೆ ಆದಾರ್ ಸಂಖ್ಯೆ ಜೋಡಣೆ ಮಾಡಿಕೊಂಡಿಲ್ಲ. ಇನ್ನು ಕೆಲವರು ಪಡಿತರ ಚೀಟಿಯಲ್ಲಿ ಹೆಸರು ಸರಿಪಡಿಸಿಕೊಂಡಿಲ್ಲ, ಹಲವರದ್ದು ಬ್ಯಾಂಕ್ ಖಾತೆ ಸಕ್ರಿಯವಾಗಿಲ್ಲ, ಇಲ್ಲವೇ ಹೆಸರು ತಪ್ಪಾಗಿರುತ್ತದೆ, ಕೆಲವರಿಗೆ ಹಣ ಬಂದಿದ್ದರೂ ಗೊತ್ತಾಗುತ್ತಿಲ್ಲ, ಹಣಪಾವತಿಯಾಗದ ಫಲಾನುಭವಿಗಳಿಗೆ ಶಿಶು ಅಭಿವೃದ್ಧಿ ಇಲಾಖೆ ವತಿಯಿಂದ ಮಾಹಿತಿ ನೀಡಲಾಗಿದೆ, ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡಿಂಗ್ ಮತ್ತು ರೇಷನ್ ಕಾರ್ಡಿಗೆ ಈಕೆ ವೈ ಸಿ ಮಾಡಿಸದೆ ಇರುವ ಪಟ್ಟಿಯನ್ನು ಹತ್ತಿರದ ಅಂಗನವಾಡಿ ಕಾರ್ಯಕರ್ತೆಯರಿಗೆ ಕಲುಹಿಸಲಾಗಿದೆ. ಇದೇ ಕಾರಣಕ್ಕೆ ಯೋಜನೆಯ ಮಾಸಿಕ ಸಹಾಯಧನ ಪಾವತಿ ಆಗಿಲ್ಲ. ಕೂಡಲೇ ಆಧಾರ್ ಸೀಡಿಂಗ್, ಇಕೆ ವೈಸಿ ಮಾಡಿಸಿ ಎಂದು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 Comments