Ticker

6/recent/ticker-posts

ಗ್ಯಾರಂಟಿ ಯೋಜನೆಗೆ ‘ಗ್ಯಾರಂಟಿ ಸ್ವಯಂ ಸೇವಕ` ರ ನೇಮಕಕ್ಕೆ ಆದೇಶ

 


ರಾಜ್ಯ ಸರಕಾರದ ಯೋಜನೆಗಳಾದ ಗೃಹಲಕ್ಷ್ಮಿ ,ಶಕ್ತಿ ಯುವನಿಧಿ,ಗೃಹಜ್ಯೋತಿ ಮತ್ತು ಅನ್ನಭಾಗ್ಯ ಜನರಿಗೆ ಸರಿಯಾಗಿ ತಲುಪುತ್ತದೆಯೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ಗ್ಯಾರಂಟಿ ಸ್ವಯಂ ಸೇವಕರನ್ನು ನೇಮಿಸಲು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.

ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳನ್ನು ಗ್ಯಾರಂಟಿ ಸ್ವಯಂ-ಸೇವಕರಾಗಿ ನೇಮಿಸಿ ಅವರು ಪ್ರತಿ ಮನೆ-ಮನೆಗೂ ಬೇಟಿ ನೀಡಿ ಗ್ಯಾರಂಟಿ ಯೋಜನೆಗಳು ತಲುಪಿರುವ ಬಗ್ಗೆ ಹಾಗೂ ಸದರಿ ಯೋಜನೆಗಳ ಬಗ್ಗೆ ಜನರ ಅಭಿಪ್ರಾಯ ಆಗುತ್ತಿರುವ ಕುರಿತು ಒಂದು ಸಮೀಕ್ಷೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುಲು ಸೂಚಿಸಲಾಗಿದೆ.



ಆಶಾ ಕಾರ್ಯಕರ್ತೆಯರ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಹೆಚ್ಚುವರಿ ಪ್ರೋತ್ಸಾಹ ಧನವನ್ನು ನೀಡಬೇಕು. 1.2ಲಕ್ಷ `ಗ್ಯಾರಂಟಿ ಸ್ವಯಂ ಸೇವಕರಿಂದ 10ರಿಂದ 15 ದಿನಗಳ ಅವಧಿಯಲ್ಲಿ ಒಬ್ಬರಿಗೆ 1000 ರೂ.ನಂತೆ ಪ್ರೋತ್ಸಾಹ ಧನ ನೀಡಿ ಸಮೀಕ್ಷೆ ನಡೆಸಲು ತಿಳಿಸಿದೆ.

ಇದು ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮೀಕ್ಷೆ  ನಡೆಯತಕ್ಕದ್ದು.ಈ ಸಮೀಕ್ಷೆಗೆ ಪ್ರತಿ ಗ್ಯಾರಂಟಿ ಸ್ವಯಂ ಸೇವಕರಿಗೆ 100 ರಿಂದ 120 ಮನೆಗಳನ್ನು ಹಂಚಿಕೆ ಮಾಡುವುದು.ಇದಕ್ಕೆ ಆಗುವ ವೆಚ್ಚ 12 ಕೋಟಿ ರೂ.ಗಳನ್ನು ಗೃಹಲಕ್ಷ್ಮಿ ಯೋಜನೆ ಲೆಕ್ಕದ ಅಡಿಯಲ್ಲಿ ಭರಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೇಂದ್ರ ಸರಕಾರದ ಹೊಸ ಸೋಲಾರ್ ವಿದ್ಯುತ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಷಿಕ್ ಮಾಡಿ...

Post a Comment

0 Comments