ಎಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ ಹಳೆಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಫೆಬ್ರವರಿ 17ರೊಳಗೆ HSRP ನಂಬರ್ ಪ್ಲೇಟ್ ಅಳವಡಿಸುವಂತೆ ಡೆಡ್ ಲೈನ್ ನೀಡಿತ್ತು.
ಆದರೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆಬ್ರವರಿ 17 ಕ್ಕೆ ಮುಗಿಯಲಿದೆ. ವಾಹನಗಳಿಗೆ HSRP ನಂಬರ್ ಪ್ಲೇಟ್ ವಿಚಾರ ಇದೀಗ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಪರಿಷತ್ ಸದಸ್ಯ ಮಾದೇಗೌಡ ಪ್ರಶ್ನಿಸಿದ್ದು, ಅವಧಿ ವಿಸ್ತರಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ.
0 Comments