5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ಕರ್ನಾಟಕ ಸರ್ಕಾರದ ಶಾಲೆಗಳಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ...
ಅಲ್ಪಸಂಖ್ಯಾತರ 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ ತರಗತಿಯ ಪ್ರವೇಶ ಪಡೆಯಲು ಒಟ್ಟು 12 ಸಾವಿರ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು, ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮೌಲಾನಾ ಆಜಾದ್ ಮಾದರಿ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳ ವಯೋಮಿತಿಯು 09 ವರ್ಷದಿಂದ 13 ವರ್ಷದ ಒಳಗಿರಬೇಕು,ಆದಾಯವು 72,50,000 ಒಳಗಿರಬೇಕು.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 100 ಅಂಕಗಳ ಪ್ರವೇಶಾತಿ ಪರೀಕ್ಷೆ ಬರೆಯಬೇಕು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಬೇಕಾಗುವ ದಾಖಲಾತಿಗಳು
ವಿದ್ಯಾರ್ಥಿಯ ಭಾವಚಿತ್ರ, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ SATS ಸಂಖ್ಯೆ,ಆದಾಯ ಪ್ರಮಾಣ ಪತ್ರ,ವ್ಯಾಸಂಗ ಪ್ರಮಾಣ ಪತ್ರ,ಜಾತಿ ಪ್ರಮಾಣ ಪತ್ರ,ಇತರೆ ಅಗತ್ಯ ದಾಖಲಾತಿಗಳು
ಅಧಿಸೂಚನೆ:ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್:ಕ್ಲಿಕ್ ಮಾಡಿ
0 Comments