ಸ್ತ್ರೀ ಶಕ್ತಿ ಸಂಘಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪಾತ್ರ ಬಹಳ ದೊಡ್ಡದಾಗಿದೆ.ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ರವರು ಹೇಳಿದರು.
ಮಹಿಳಾ ಜಾಗೃತಿ ಸಮಾವೇಶವಾದ ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ಮಾತನಾಡಿದ ಅವರು ಈ ಹಿಂದೆ ಎಸ್ ಎಂ.ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ,ಆರ್ಥಿಕ ಶಕ್ತಿಯನ್ನು ತುಂಬಿದರು.ಇದೀಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.
ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಅನುಕೂಲ ಮಾಡವ ಸಲುವಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು ಇದರ ಫಲವಾಗಿ ಇಂದು 1.24 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿದೆ.ಮುದಿನ ದಿನಗಳಲ್ಲಿ ಮಹಿಳೆಯರಿಗೆ ಸುಲಭವಾಗುವಂತೆ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುತ್ತೆವೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ ರಾಷ್ಟ ಮಟ್ಟದ ನಾಯಕ
ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಕೇವಲ ಕರ್ನಾಟಕದ ನಾಯಕ ಅಲ್ಲ, ಅವರು ರಾಷ್ಟ ಮಟ್ಟದ ನಾಯಕ. ಅಭಿವೃದ್ಧಿಗೆ ಮತ್ತೊಂದು ಹೆಸರೇ ಡಿ.ಕೆ.ಶಿವಕುಮಾರ್. ಬೆಂಗಳೂರು ಮಾದರಿಯಲ್ಲಿ ಕನಕಪುರ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
0 Comments