ನೀವು ವಿವಿಧ ಪದವಿ ಪಾಸ್ ಮಾಡಿದ್ದೀರಾ, ಬ್ಯಾಂಕ್ ಹುದ್ದೆಯಲ್ಲಿ ಆಸಕ್ತಿ ಇದ್ದರೆ, ಈಗಲೇ ಅರ್ಜಿ ಸಲ್ಲಿಸಿ. ಕರ್ನಾಟಕ ಬ್ಯಾಂಕ್ ತನ್ನ ಎಲ್ಲ ಶಾಖೆಗಳಲ್ಲಿ ಕ್ಲರ್ಕ್ ಪೋಸ್ಟ್‌ಗಳನ್ನು ನೇಮಕ ಮಾಡಲು ಅಧಿಸೂಚನೆ ಹೊರಡಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿಗೆ ಕೊನೆ 2 ದಿನ ಬಾಕಿ ಇದ್ದು, ನವೆಂಬರ್ 30 ರೊಳಗೆ ಅರ್ಜಿ ಹಾಕಿರಿ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕ ನಡೆಸಲಾಗುತ್ತದೆ.
ಹುದ್ದೆಗಳ ವಿವರ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಮಾಸಿಕ ವೇತನ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಸೇರಿದಂತೆ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯಲ್ಲಿರುವ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿಕೊಂಡು ಸಂಪೂರ್ಣ ಓದಿ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ ?
ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವೇತನವೆಷ್ಟು?
ನೇಮಕವಾದ ಅಭ್ಯರ್ಥಿಗಳಿಗೆ ದೇಶದಾದ್ಯಂತ ವಿವಿಧ ಕಚೇರಿಗಳು, ಶಾಖೆಗಳಲ್ಲಿ ಉದ್ಯೋಗ ಮಾಡುವ ಅವಕಾಶವಿರುತ್ತದೆ. ಮಾಸಿಕ ಸಂಬಳವು ರೂ. 24,050 ರಿಂದ ರೂ. 64,480 ವರೆಗೂ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಡಿಎ, ಎಚ್‌ಆರ್‌ಎ ಮತ್ತು ಇತರೆ ಸೌಲಭ್ಯಗಳು ಅನ್ವಯವಾಗಲಿವೆ.
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು, ಚೆನ್ನೈ, ಮುಂಬೈ, ನವದೆಹಲಿ, ಹೈದರಾಬಾದ್, ಕೋಲ್ಕತ್ತಾ, ಪುಣೆ, ಮಂಗಳೂರು, ಧಾರವಾಡ ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಆನ್‌ಲೈನ್ ಪರೀಕ್ಷೆಗಳು ನಡೆಯಲಿದ್ದು; ಪರೀಕ್ಷೆಯಲ್ಲಿ ನಿಗದಿತ ಅಂಕ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30-11-2024
ಅರ್ಜಿ ಸಲ್ಲಿಕೆ ಲಿಂಕ್ Apply Now
0 Comments