ಕರ್ನಾಟಕ ಸರ್ಕಾರವು ಕಾರ್ಮಿಕರಿಗಾಗಿ ಲೇಬರ್ ಕಾರ್ಡನ್ನು ಜಾರಿಗೆ ತಂದಿದ್ದು ಇದರ ಮೂಲಕ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಅನೇಕ ರೀತಿಯ ಸೌಲತ್ತುಗಳನ್ನು ನೀಡುತ್ತಾ ಬಂದಿದೆ. ಸರ್ಕಾರವು ಇದಕ್ಕಾಗಿ ಒಂದು ಆನ್ಲೈನ್ ಪೋರ್ಟಲ್ ಮಾಡಿದ್ದು ಈ ಮೂಲಕ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಲ್ಲಿಸಿ, ಇರುವಂತಹ ಹಲವಾರು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಫಲಾನುಭವಿಗಳಿಗೆ ಮಂಡಳಿಯಿಂದ ಸಿಗುವ ಸೌಲಭ್ಯಗಳು
* ಚಣಿ ಸೌಲಭ್ಯ : ಮೂರು ವರ್ಷ ಸದಸ್ಯತ್ವದೊಂದಿಗೆ 60 ವರ್ಷ ಪೂರೈಸಿದ ಫಲಾನುಭವಿಗಳಿಗೆ ಮಾಸಿಕ 3,000 ರೂ.
* ಕುಟುಂಬ ಪಿಂಚಣಿ ಸೌಲಭ್ಯ: ಮೃತ ಪಿಂಚಣಿದಾರರ ಪತಿ/ಪತ್ನಿಗೆ ಮಾಸಿಕ 1000 ರೂ.
* ದುರ್ಬಲತೆಯ ಪಿಂಚಣಿ : ನೋಂದಾಯುಗ್ರಹ ರಾಶಿ ಸಹಾಯಧನ
* ಟ್ರೈನಿಂಗ್ ಕಮ್ ಟೂಲ್ ಕಿಟ್ ಸೌಲಭ್ಯ (ಶ್ರಮ ಸಾಮರ್ಥ್ಯ) : 20,000 ರೂ. ತನಕ
* ಶ್ರಮ ಸಂಸಾರ ಸಾಮರ್ಥ್ಯ ತರಬೇತಿ ಸೌಲಭ್ಯ: ನೋಂದಾಯಿತ ಫಲಾನುಭವಿಯ ಅವಲಂಬಿತರಿಗೆ
* ವಸತಿ ಸೌಲಭ್ಯ (ಕಾರ್ಮಿಕ ಗೃಹ ಭಾಗ್ಯ : 2,00,000 ರೂ. ವರೆಗೆ ಮುಂಗಡ ಸಾಲ ಸೌಲಭ್ಯ
* ಹೆರಿಗೆ ಸೌಲಭ್ಯ (ತಾಯಿ ಲಕ್ಷ್ಮೀ ಬಾಂಡ್ : ಮಹಿಳಾ ಫಲಾನುಭವಿಯ ಮೊದಲ ಎರಡು ಮಕ್ಕಳಿಗೆ 50,000 ರೂ.
*ಶಿಶುಪಾಲನಾ ಸೌಲಭ್ಯ: ಕಾರ್ಮಿಕರ ಮಕ್ಕಳ ಪಾಲನೆಗಾಗಿ ರಾಜ್ಯದಾದ್ಯಂತ 100 ಕಿತ್ತೂರು ರಾಣಿ ಚೆನ್ನಮ್ಮ ಶಿಶುಪಾಲನಾ ಕೇಂದ್ರಗಳ ಪ್ರಾರಂಭ
*ಅಂತ್ಯಕ್ರಿಯೆ ವೆಚ್ಚ : 4,000 ರೂ. ಹಾಗೂ ಅನುಗ್ರಹ ರಾಶಿ 71,000ರೂ. ಸಹಾಯಧನ
*ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೋಂದಾಯಿತ ಫಲಾನುಭವಿಯ ಮಕ್ಕಳಿಗೆ ಯುಪಿಎಸ್ ಸಿ/ಕೆಪಿಎಸ್ ಸಿ (UPSC/KPSC) ಸ್ಪರ್ಧಾತ್ಮಕ ಪರೀಕ್ಷಾತರಬೇತಿಸೌಲಭ್ಯ
* ಶೈಕ್ಷಣಿಕ ಸಹಾಯಧನ (ಕಲಿಕಾ ಭಾಗ) : ಫಲಾನುಭವಿಯ ಇಬ್ಬರು ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಶಿಶುವಿಹಾರ! ನರ್ಸರಿಯಿಂದ ಹಿಡಿದು ಪ್ರಾಥಮಿಕ, ಪ್ರೌಢಶಿಕ್ಷಣ, ಡಿಪ್ಲೊಮೊ, ಐಟಿಐ, ಪಾಲಿಟೆಕ್ನಿಕ್, ಪದವಿಪೂರ್ವ, ಪದವಿ ನೋಂದಾಯಿತ ಕಾರ್ಮಿಕರ ಮಕ್ಕಳ ಪಿಎಚ್ ಡಿ/ಎಂಫಿಲ್/ಐಐಟಿ/ಐಐಎಂಎನ್‌ಐಟಿ ಹಾಗೂ ಕೇಂದ್ರ ಸರ್ಕಾರದ ಪಟ್ಟಿಯಲ್ಲಿರುವ ಶಿಕ್ಷಣದ ತನಕ ವಾರ್ಷಿಕ ಸಹಾಯ ಸಹಾಯ ಧನವನ್ನು ಕಾರ್ಮಿಕ ಕಲ್ಯಾಣ ಮಂಡಳಿ ನೀಡಲಿದೆ.
* ವೈದ್ಯಕೀಯ ಸಹಾಯಕ ಧನ (ಕಾರ್ಮಿಕ ಆರೋಗ್ಯ ಭಾಗ) ನೋಂದಾಯಿತ ಫಲಾನುಭವಿ ಹಾಗೂ ಅವಲಂಬಿತರಿಗೆ 300 ರೂ.ನಿಂದ 20000ರೂ ತನಕ ಸಹಾಯಧನ
* ಮದುವೆ ಸಹಾಯಧ (ಗೃಹ ಲಕ್ಷ್ಮೀ ಬಾಂಡ್): ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲು 60,000
* ಬಿಎಂಟಿಸಿ ಬಸ್ ಪಾಸ್ ಸೌಲಭ್ಯ: ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಅಥವಾ ವಾಸಸಳದಿಂದ ಬೆಂಗಳೂರಿಗೆ ಪ್ರಯಾಣಿಸುವ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ
* ತಾಯಿ ಮಗು ಸಹಾಯ ಹಸ್ತ ಮಹಿಳಾ ಫಲಾನುಭವಿಯು ಮಗುವಿಗೆ ಜನ್ಮ ನೀಡಿದ ಸಂದರ್ಭದಲ್ಲಿ ಆಕೆಯ ಮಗುವಿನ ಶಾಲಾಪೂರ್ವ ಶಿಕ್ಷಣ ಮತ್ತು ಪೌಷ್ಟಿಕತೆಗಾಗಿ ಮಗುವಿಗೆ ಮೂರು ವರ್ಷಗಳು ತುಂಬುವ ತನಕ ವಾರ್ಷಿಕ 6000 ರೂಪಾಯಿ ಸಹಾಯಧನ
* ಕನ್ನಡಕ, ಶ್ರವಣಯಂತ್ರ ಕೃತಕ ಕೈಕಾಲು ಮತ್ತು ಗಾಲಿ ಕುರ್ಚಿ : ಮರುಪಾವತಿ ಸೌಲಭ್ಯ
* ಕೆಎಸ್ ಆರ್ ಟಿಸಿ ಬಸ್ ಪಾಸ್ ನ ಸೌಲಭ್ಯ: ನೋಂದಾಯಿತಕಾರ್ಮಿಕರಿಗೆ
ಬೇಕಾದ ಅಗತ್ಯವಾದ ದಾಖಲೆಗಳು
ಆಧಾರ್ ಕಾರ್ಡ್
Passport Size ಫೋಟೋ
ಬ್ಯಾಂಕ್ ಖಾತೆ ಸಂಖ್ಯೆ
ಮೊಬೈಲ್ ನಂಬರ
ನಿಮ್ಮ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಸಂಖ್ಯೆ
Salary Slip
ಹಾಜರಾತಿ slip
ಇಂಜಿನಿಯರಿಂಗ್ Form
0 Comments