Ticker

6/recent/ticker-posts

ತಮಿಳುನಾಡಿನಲ್ಲಿ ಮಳೆ ಅಬ್ಬರ 22 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್..ಸಂಪೂರ್ಣ ಮಾಹಿತಿ

 

ಬಂಗಾಳಕೊಲ್ಲಿಯಲ್ಲಿ ನಿರಂತರವಾಗಿ ವಾಯುಭಾರ ಕುಸಿತವಾಗುತ್ತಿದ್ದು ಒಂದಾದ ನಂತರ ಮತ್ತೊಂದು ಚಂಡಮಾರುತಗಳು ರೂಪಗೊಳ್ಳುತ್ತಿವೆ. ಇತ್ತೀಚೆಗೆ ಫೆಂಗಲ್ ಚಂಡಮಾರುತವು ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಅವಾಂತರ ಸೃಷ್ಟಿಸಿತ್ತು. ಇದೀಗ, ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಗುರುವಾರ, ತಮಿಳುನಾಡಿನಲ್ಲಿ ಮಳೆಯಾಗುತ್ತಿದೆ. ಹೆಚ್ಚು ಮಳೆ ಸುರಿಯುವ ಆತಂಕವಿದ್ದು, ಅಲ್ಲಿನ 22 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕರ್ನಾಟಕದಲ್ಲಿ 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡಿನ ಚೆನ್ನೈ ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೆ ಕರೂರ್, ವೆಲ್ಲೂರು, ರಾಣಿಪೇಟ್, ತಿರುಪತ್ತೂ‌ ಮತ್ತು ತೂತುಕುಡಿ ಹಾಗೂ ಅರಿಯಲೂರ್ ಸೇರಿದಂತೆ 22 ಜಿಲ್ಲೆಗಳಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ತಿರುವಣ್ಣಾಮಲೈನಲ್ಲಿ ಶಾಲೆಗಳು ಮಾತ್ರವಲ್ಲದೆ, ಕಾಲೇಜುಗಳಿಗೂ ರಜೆ ನೀಡಲಾಗಿದೆ. ವೆಲ್ಲೂರಿನ ತಿರುವಳ್ಳುವರ್ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದೆ.

ಗುರುವಾರ ಬೆಳಗ್ಗೆಯಿಂದಲೇ ತಮಿಳುನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಈಗಾಗಲೇ, ಕಾರೈಕಲ್‌ನಲ್ಲಿ 8 ಸೆಂಮೀ ಮಳೆಯಾಗಿದ್ದರೆ, ಆದಿರಾಮಪಟ್ಟಿಣಂ, ವೃದ್ಧಾಚಲಂ, ನಾಗಪಟ್ಟಿಣಂ, ತಿರುವರೂರ್, ಕಡಲೂರು, ಪೂನಮಲ್ಲಿ ಚೆನ್ನೈನಲ್ಲಿ 5-7 ಸೆ.ಮೀ ಮಳೆ ಸುರಿದಿದೆ.

ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿಯೂ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ 9 ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನ ಹಲವು ಭಾಗಗಳಲ್ಲಿ ತುಂತುರು ಮಳೆಯಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮಳೆಯಾಗುವ ಸಾಧ್ಯತೆ ಇದೆ.

Post a Comment

0 Comments