Ticker

6/recent/ticker-posts

ಎಸ್​ಎಂ ಕೃಷ್ಣ ನಿಧನ: ಕರ್ನಾಟಕದಲ್ಲಿ 3 ದಿನ ಶೋಕಾಚರಣೆ, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ

 

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ರಾಜ್ಯ ಸರ್ಕಾರವು ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಬುಧವಾರ ಸರ್ಕಾರಿ ರಜೆ ಘೋಷಿಸಲಾಗಿದೆ. ಎಸ್​ಎಂ ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಡೆಯಲಿದೆ.

 ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

ಖಾಸಗಿ ಶಾಲೆಗಳಿಗೂ ರಜೆ

ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ  ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ  ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಅಂತ್ಯಕ್ರಿಯೆ ಎಲ್ಲಿ?

ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್​ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ

Post a Comment

0 Comments