ರಾಜ್ಯ ಸರ್ಕಾರವು ಕರ್ನಾಟಕ ಕೌಶಲಾಭಿವೃದ್ಧಿ ನಿಗಮದ (Karnataka Skill Development Corporation -KSDC) ಮೂಲಕ ವಿದ್ಯಾರ್ಥಿಗಳ ಕೌಶಲ ಹೆಚ್ಚಳಕ್ಕೆ ಕೆಲ ಮಹತ್ವದ ಯೋಜನೆಗಳ ಜಾರಿಗೆ ಮುಂದಾಗಿದೆ. 2023-2024ನೇ ಶೈಕ್ಷಣಿಕ ಸಾಲಿನ ದ್ವಿತೀಯ ಶೇ.70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಕ್ಕೆ ಪೂರಕ ತರಬೇತಿ (Skill Training) ನೀಡಲು ಸನ್ನದ್ಧವಾಗಿದೆ.
ಒಪ್ಪಂದ ಪತ್ರಕ್ಕೆ ಸಹಿ
ಈ ಕುರಿತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದೊಂದಿಗೆ (KSDC) ಎಚ್‌ಸಿಎಲ್-ಟೆಕ್ ಬೀ ಸಂಸ್ಥೆಯು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಕನಗವಲ್ಲಿ ಮತ್ತು ಎಚ್‌ಸಿಎಲ್-ಟೆಕ್ ಬೀ ರಾಜ್ಯ ಮುಖ್ಯಸ್ಥರಾದ ಆರ್. ಪಾಪಿರೆಡ್ಡಿ ಅವರು ಇತ್ತೀಚಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಈ ಮೂಲಕ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದೆ.
ಎಚ್‌ಸಿಎಲ್-ಟೆಕ್ ಬೀನಲ್ಲಿ ಇಂಟರ್ನ್‌ಶಿಪ್‌ಗಾಗಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ನೀಡಲಾಗುತ್ತಿದೆ. ನಂತರ ಅದೇ ಸಂಸ್ಥೆಯಲ್ಲಿ ಉದ್ಯೋಗಿಗಳಾದರೆ ವಾರ್ಷಿಕ 1.7 ಲಕ್ಷದಿಂದ 2.2 ಲಕ್ಷ ರೂಪಾಯಿ ವೇತನ ನೀಡಲಾಗುತ್ತದೆ. ಇದರ ಜೊತೆಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನೂ ಒದಗಿಸಲಾಗುತ್ತದೆ. ತರಬೇತಿ ಪಡೆಯಲು ಶುಲ್ಕ ನಿಗದಿಪಡಿಸಲಾಗಿದೆ.
2017ರಲ್ಲಿ ಎಚ್.ಸಿ.ಎಲ್-ಟೆಕ್ ಬೀ ಸಂಸ್ಥೆಯು ಈ ಯೋಜನೆ ಆರಂಭಿಸಿದೆ. 2023-2024 ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ 2025ರಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೂಡಲೇ https://bit.ly/TechBeeKSDC ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.
ನೋಂದಣಿಗಾಗಿ:ಕ್ಲಿಕ್ ಮಾಡಿ
0 Comments