Ticker

6/recent/ticker-posts

ದೇವದಾಸಿ ಮಹಿಳೆಯರಿಗೂ ʼಗೃಹಲಕ್ಷ್ಮೀʼ ನೆರವು : ಲಕ್ಷ್ಮೀ ಹೆಬ್ಬಾಳ್ಕರ್*

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೂ ಗೃಹ ಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದೆ. ಇನ್ನು ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಸ್ಪ ಷ್ಟಪಡಿಸಿದರು.

ಶುಕ್ರವಾರ ವಿಧಾನಪರಿಷತ್ತಿನಲ್ಲಿ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ''ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂ., ಆರ್ಥಿಕ ಸಹಾಯ ಯೋಜನೆಯಡಿ 30‌ ಸಾವಿರ ರೂ. ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ'' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

''ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6,018 ದೇವದಾಸಿ ಮಹಿಳೆಯರನ್ನು ಸಮೀಕ್ಷೆಯಲ್ಲಿ ಗುರುತಿಸಿದ್ದು 2,653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬಂಧಿಸಿದಂತೆ ಮತ್ತೊಮ್ಮೆ ಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒದಗಿಸಲಾಗುವುದು. ಅದೇ ರೀತಿ ಅನಿಷ್ಟವಾಗಿರುವ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ'' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು.

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ: ಅರ್ಜಿ ಆಹ್ವಾನ..ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Post a Comment

0 Comments