Ticker

6/recent/ticker-posts

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ’ಸಂಪೂರ್ಣ ಮಾಹಿತಿ..

 

ಬೆಂಗಳೂರು : ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ಒದಗಿಸುವ ಸಂಬಂಧ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬ್ಯಾಂಕ್ ಮುಖ್ಯಸ್ಥರ ಜತೆ ನಡೆಸಿದ ಸಭೆ ಫಲಪ್ರದ ವಾಗಿದೆ.

ಮೊದಲ ಹಂತದಲ್ಲಿ ಮೂರು ಸಾವಿರ ಜನರಿಗೆ ತಲಾ ಐದು ಲಕ್ಷ ರೂ. ಸಾಲ ನೀಡಲು ಬ್ಯಾಂಕ್ ಮುಖ್ಯಸ್ಥರು ಸಮ್ಮತಿ ಸೂಚಿಸಿದ್ದಾರೆ.ಮೊದಲ ಹಂತದಲ್ಲಿ ಸಾಲಕ್ಕಾಗಿ ಮೂರು ಸಾವಿರ ಅರ್ಜಿ ಸಲ್ಲಿಕೆಯಾಗಿದ್ದು 316 ಜನರಿಗೆ ಸಾಲ ಮಂಜೂರು ಆಗಿದ್ದು,ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಎಸ್ ಬ್ಯಾಂಕ್, ಇಂಡಿಯನ್ ಓವರ್ ಸೀಸ್ ಬ್ಯಾಂಕ್, ಐ ಐ ಎಫ್ ಎಲ್ ಬ್ಯಾಂಕ್ ವತಿಯಿಂದ 15.80 ಕೋಟಿ ರೂ. ಮೊತ್ತದ ಚೆಕ್ ಗಳನ್ನು ಸಚಿವರಿಗೆ ಇದೇ ಸಂದರ್ಭದಲ್ಲಿ ಹಸ್ತಾಂತರ ಮಾಡಲಾಯಿತು.

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಬೆಂಗಳೂರಿನ ಪ್ರಮುಖ ಸ್ಥಳ ಗಳಲ್ಲಿ ಬರಲಿದ್ದು ಉತ್ತಮ ಮಾರುಕಟ್ಟೆ ಬೆಲೆ ಇದೆ. ಹೀಗಾಗಿ ಬ್ಯಾಂಕ್ ಗಳು ಪ್ಲಾಟ್ ಅಡಮಾನ ಇಟ್ಟುಕೊಂಡು ಸಾಲ ನೀಡಬಹುದು. ಹಂತ ಹಂತ ವಾಗಿ 45125 ಫಲಾನುಭವಿಗಳಿಗೆ ಸಾಲ ಮಂಜೂರು ಆದರೆ ನಾವು ಯೋಜನೆತ್ವರಿತ ವಾಗಿ ಪೂರ್ಣ ಗೊಳಿಸಿ ಹಂಚಿಕೆ ಮಾಡಲಿದ್ದೇವೆ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.ನಿಗಮದ ಎಂ ಡಿ ಸುಶೀಲಮ್ಮ, ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ | ಸ್ವಂತ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿ ನೆರವು..ಎಷ್ಟು ಸಬ್ಸಿಡಿ ಸಿಗುತ್ತೆ ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Post a Comment

0 Comments