ಹೊಸ ವರ್ಷದ ವೇಳೆ ರಾತ್ರಿ ಬೆಂಗಳೂರಿನ ಹಲವೆಡೆ ಸಂಭ್ರಮಾಚರಣೆಗಳು ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 31 ರಂದು ಮಧ್ಯರಾತ್ರಿ 2:15 ರವರೆಗೆ ಮೆಟ್ರೋ ಸೇವೆ ಅವಧಿ ವಿಸ್ತರಿಸಲಾಗಿದೆ. ನೇರಳೆ ಹಸಿರು ಮಾರ್ಗದಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ರಾತ್ರಿ 11ರಿಂದ 10 ನಿಮಿಷಕ್ಕೊಂದು ರೈಲು ಸೇವೆ ಇರಲಿದ್ದು, ಜನವರಿ 1ರಂದು ಮುಂಜಾನೆ 2 ಗಂಟೆಗೆ ಎಲ್ಲ ಮೆಟ್ರೋ ಟರ್ಮಿನಲ್ನಿಂದ ಕೊನೆ ರೈಲು ಹೊರಡಲಿದೆ. ಆದರೆ ಮೆಜೆಸ್ಟಿಕ್ನಿಂದ ಮುಂಜಾನೆ 2.40ಕ್ಕೆ ಕೊನೆ ರೈಲು ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಎಂಜಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ಡಿಸೆಂಬರ್ 31ರ ರಾತ್ರಿ 11 ಗಂಟೆಯ ನಂತರ ಪ್ರವೇಶ ಹಾಗೂ ನಿರ್ಗಮನ ದ್ವಾರ ಬಂದ್ ಆಗಲಿವೆ. ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಕರಿಗೆ ಮೆಟ್ರೋ ಸೇವೆ ಲಭ್ಯವಾಗಲಿದೆ.
0 Comments