Ticker

6/recent/ticker-posts

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ: ಅರ್ಜಿ ಆಹ್ವಾನ..


 ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ಇರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಆಳ್ವಾಸ್‌ ನಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಇಲ್ಲಿ ಉಚಿತ ಶಿಕ್ಷಣ ಪಡೆಯಲು ಅರ್ಹತಾ ಪರೀಕ್ಷೆ ಬರೆಯಬೇಕು. ಈ ಕುರಿತು ಮಾಹಿತಿ ತಿಳಿದು ಅರ್ಜಿ ಸಲ್ಲಿಸಿ.

ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2024-25ರ ಶೈಕ್ಷಣಿಕ ವರ್ಷದ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಉಚಿತ ಶಿಕ್ಷಣಕ್ಕಾಗಿ 6, 7, 8 ಮತ್ತು 9ನೇ ತರಗತಿಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಪಡೆಯಲು ಇಂದೊಂದು ಸುವರ್ಣಾವಕಾಶವಾಗಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು

SATS – ID

ಆಧಾರ್ ಕಾರ್ಡ್

ಇತ್ತೀಚಿನ ಭಾವಚಿತ್ರ

ಮೊಬೈಲ್ ನಂಬರ್

ಇಮೇಲ್

ಇತರೆ ಅಗತ್ಯ ದಾಖಲೆಗಳು


ಕುರಿ ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ.. ಉತ್ತಮ ಯೋಜನೆ ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ಪ್ರಕ್ರಿಯೆ ಹೇಗೆ?

Alvas free education scheme ಆಳ್ವಾಸ್ ಉಚಿತ ಶಿಕ್ಷಣ ಸೌಲಭ್ಯದ ಪಡೆಯಲು ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ಮೂರು ಹಂತದಲ್ಲಿ ಪರೀಕ್ಷೆ ನಡೆಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಮೊದಲನೇ ಹಂತದಲ್ಲಿ ಓ.ಎಂ.ಆರ್ ಮಾದರಿಯಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಇದರಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2ನೇ ಹಂತದಲ್ಲಿ ಬರವಣಿಗೆ ಆಧಾರಿತ ಚಟುವಟಿಕೆಗಳನ್ನು ನಡೆಸಲಾಗುವುದು.

2ನೇ ಹಂತದಲ್ಲಿ 6 ಮತ್ತು 7ನೇ ತರಗತಿ ಪ್ರವೇಶಾತಿಗೆ 120 ಅಂಕ ಹಾಗೂ 8 ಮತ್ತು 9ನೇ ತರಗತಿ ಪ್ರವೇಶಾತಿಗೆ 150 ಅಂಕಗಳ ಆಧಾರದಲ್ಲಿ ಚಟುವಟಿಕೆಗಳನ್ನು ನಡೆಸಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ಮರುದಿನವೇ ನೇರ ಸಂದರ್ಶನ ನಡೆಸಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.

ಆಯ್ಕೆ ಪರೀಕ್ಷೆಯ ನಡೆಸುವ ಸ್ಥಳ : ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆಯ ವಿದ್ಯಾಗಿರಿಯ ಆಳ್ವಾಸ್ ಆವರಣದಲ್ಲಿ ಆಯ್ಕೆ ಪರೀಕ್ಷೆ ನಡೆಸಲಾಗುತ್ತದೆ.

ಹೇಗೆ ಅರ್ಜಿ ಸಲ್ಲಿಸಬೇಕು?

ಅರ್ಹ ವಿದ್ಯಾರ್ಥಿಗಳು ನಾವು ಕೆಳಗೆ ನೀಡಿರುವ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯವಿರುವ ನಿಖರ ಮಾಹಿತಿಗಳನ್ನು ಭರ್ತಿ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಫಾರ್ಮ್’ನ (Application form) ಎರಡು ಪ್ರತಿಯನ್ನು ಪ್ರಿಂಟ್ ತೆಗೆದುಕೊಳ್ಳಬೇಕು. ಒಂದು ಪ್ರತಿಯನ್ನು ನಿಮ್ಮ ಹತ್ತಿರ ಇಟ್ಟುಕೊಂಡು ಇನ್ನೊಂದು ಪ್ರತಿಯನ್ನು ಕೆಳಗಿನ ವಿಳಾಸಕ್ಕೆ ಅಂಚೆ ಮುಖಾಂತರ ಕಳುಹಿಸಿಕೊಡಬೇಕು.

ವಿಳಾಸ : ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ), ಮೂಡುಬಿದಿರೆ, ದಕ್ಷಿಣ ಕನ್ನಡ – 574227

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ :

15-01-2025

ಪ್ರವೇಶಾತಿ ಪರೀಕ್ಷೆ ನಡೆಸುವ ದಿನಾಂಕ :

02-03-2025

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Apply ಮಾಡಿ

Post a Comment

0 Comments