ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಬ್ಯಾಂಕ್:
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್
ಹುದ್ದೆ ಹೆಸರು:
ಕಿರಿಯ ಸಹಾಯಕರು
ಹುದ್ದೆಗಳ ಸಂಖ್ಯೆ: 32 ವೇತನ: 30,350 – 58.250 ವಿದ್ಯಾರ್ಹತೆ:
* ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇಕಡ.55 ಕನಿಷ್ಠ ಅಂಕಗಳಿಕೆಯ ವಾಣಿಜ್ಯೇತರ ಪದವಿ ಅಥವಾ ಶೇಕಡ.50 ಕನಿಷ್ಠ ಅಂಕಗಳಿಕೆಯ ವಾಣಿಜ್ಯ ಪದವಿ ಪಡೆದಿರಬೇಕು.
* ಡಿಪ್ಲೊಮ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವೀಧರರಿಗೆ ಆದ್ಯತೆ ನೀಡಲಾಗುತ್ತದೆ.
* ಕನಿಷ್ಟ 6 ತಿಂಗಳು ಕಡಿಮೆ ಇಲ್ಲದ ಡಿಪ್ಲೊಮ ಇನ್ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಮಾಡಿರತಕ್ಕದ್ದು.
ವಯೋಮಿತಿ:
* ಹುದ್ದೆಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು.
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
* ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
* SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?:
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಒಕ್ಕೂಟದ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.1750.
* ಎಸ್‌ಸಿ / ಎಸ್‌ಟಿ / ಪ್ರವರ್ಗ-1, ಮಹಿಳೆಯರಿಗೆ ರೂ.1250.
* ಅಂಗವಿಕಲ ಅಭ್ಯರ್ಥಿಗಳಿಗೆ ರೂ.1250.
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ:
20-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
16-01-2025
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?:
ಕೊಡಗು ಜಿಲ್ಲಾ ಸಹಕಾರ ಬ್ಯಾಂಕ್ ಒಕ್ಕೂಟದ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
0 Comments