Ticker

6/recent/ticker-posts

ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೋರ್ಟ್‌ಗಳಲ್ಲಿ ಉದ್ಯೋಗಾವಕಾಶ: 10th, 12th ವಿದ್ಯಾರ್ಹತೆ,ಸಂಪೂರ್ಣ ಮಾಹಿತಿ..

 

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ (District Court Bangalore Rural) ಖಾಲಿ ಇರುವ ಪ್ಯೂನ್ ಹಾಗೂ ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 10ನೇ, 12ನೇ ತರಗತಿ ಹಾಗೂ ಡಿಪ್ಲೋಮಾ ಪದವೀಧರರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಖಾಲಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮಾರ್ಚ್ 20, 2024 ಅಂತಿಮ ದಿನ ನಿಗದಿಪಡಿಸಲಾಗಿತ್ತು. ಇದೀಗ ಜನವರಿ 06, 2025ರ ವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ನೇಮಕಾತಿ ಕುರಿತ ಸಂಕ್ಷಿಪ್ತ ವಿವರ

·* ನೇಮಕಾತಿ ಸಂಸ್ಥೆ : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ

* ಹುದ್ದೆಗಳ ಹೆಸರು : ಪ್ಯೂನ್, ಟೈಪಿಸ್ಟ್

* ಒಟ್ಟು ಖಾಲಿ ಹುದ್ದೆಗಳು : 28+30=58 ಹುದ್ದೆಗಳು

* ಅರ್ಜಿ ಸಲ್ಲಿಕೆ : ಆನ್‌ಲೈನ್‌ ಮುಖಾಂತರ

* ಉದ್ಯೋಗ ಸ್ಥಳ : ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿವಿಧ ತಾಲ್ಲೂಕುಗಳು

ವಿದ್ಯಾರ್ಹತೆ, ವಯೋಮಿತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಪ್ಯೂನ್ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಟೈಪಿಸ್ಟ್ ಹುದ್ದೆಗಳಿಗೆ 12ನೇ ತರಗತಿ, ಡಿಪ್ಲೊಮಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

ಪ್ಯೂನ್ ಹುದ್ದೆಗಳಿಗೆ 18ರಿಂದ 35 ಹಾಗೂ ಟೈಪಿಸ್ಟ್ ಹುದ್ದೆಗಳಿಗೆ 18-38 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. 2ಎ, 2ಬಿ, 2ಎ, ಮತ್ತು 3ಬಿ ಅಭ್ಯರ್ಥಿಗಳಿಗೆ 03 ವರ್ಷಗಳು, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿಸಡಿಕೆ ನಿಗದಿಪಡಿಸಲಾಗಿದೆ.

ಮಾಸಿಕ ವೇತನವೆಷ್ಟು?

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ಪ್ಯೂನ್ ಹುದ್ದೆಗಳಿಗೆ ನೇಮಕವಾಗುವ ಅಭ್ಯರ್ಥಿಗಳಿಗೆ 17,000 - 28,950 ರೂ. ಹಾಗೂ ಟೈಪಿಸ್ಟ್ ಹುದ್ದೆಗಳಿಗೆ 21,400 – 42,000 ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಇತರ ಸವಲತ್ತುಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕವೆಷ್ಟು?

ಎಸ್‌ಸಿ, ಎಸ್‌ಟಿ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ 2ಎ, 2ಬಿ, 2ಎ, ಮತ್ತು 3ಬಿ

ಅಭ್ಯರ್ಥಿಗಳಿಗೆ 100 ರೂ. ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕವಿದೆ. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 23-12-2024 • ಅರ್ಜಿ ಸಲ್ಲಿಕೆ ಕೊನೇ ದಿನಾಂಕ : 06-01-2025

* ಅಧಿಸೂಚನೆ : Download

* ಅರ್ಜಿ ಲಿಂಕ್ : Apply Now

Post a Comment

0 Comments