ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜ.15ರಂದು ನಿಗದಿಯಾಗಿದ್ದ UGC-NET ಪರೀಕ್ಷೆ ಮುಂದೂಡಿದೆ. ಜನವರಿ 15, 2025 ರಂದು ಪೊಂಗಲ್, ಮಕರ ಸಂಕ್ರಾಂತಿ ಮತ್ತು ಇತರ ಹಬ್ಬಗಳಿರುವ ಕಾರಣ UGC-NET 2024ರ ಪರೀಕ್ಷೆಯನ್ನು ಮುಂದೂಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಪತ್ರ ಬಂದಿತ್ತು.
ಈ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಹಿತದೃಷ್ಟಿಯಿಂದ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜನವರಿ 15, 2025 ರಂದು ನಿಗದಿಯಾಗಿದ್ದ UGC-NET ಡಿಸೆಂಬರ್ 2024 ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಿದೆ. ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.
0 Comments