ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರಾದ ರಿಕ್ಷಾ ಚಾಲಕರಿಗೆ, ಟಾಕ್ಸಿ ಚಾಲಕರಿಗೆ, ಬಸ್ ಚಾಲಕ,ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡಿಪೋ ಗುಮಾಸ್ತ, ಸಮಯ ಪಾಲಕ, ಕಾವಲುಗಾರ ಅಥವಾ ಪರಿಚಾರಕ, ಇನ್ನಿತರ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ, ಕರ್ನಾಟಕ ರಾಜ್ಯ ಸರ್ಕಾರವು, “ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆ"ಯನ್ನು ರೂಪಿಸಿದೆ.
ಯೋಜನೆಯಡಿ ದೊರಕುವ ಸೌಲಭ್ಯಗಳು:
1) ಅಪಘಾತ ಪರಿಹಾರ ಸೌಲಭ್ಯ
▶️ಅಪಘಾತದಿಂದ ಫಲಾನುಭವಿಗಳು ನಿಧನರಾದಲ್ಲಿ, ನಾಮನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ.
▶️ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ರೂ.2 ಲಕ್ಷದ ವರೆಗೆ ಪರಿಹಾರ.
▶️ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ-ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 50,000/- ರವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದು ಹಾಗೂ 15 ದಿನಗಳಿಗಿಂತ ಹೆಚ್ಚು ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ. 1 ಲಕ್ಷದ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದರ ಮರುಪಾವತಿ.
2) ನೈಸರ್ಗಿಕ ಮರಣ ಪರಿಹಾರ ಹಾಗೂ ಅಂತ್ಯಸಂಸ್ಕಾರ ವೆಚ್ಚ
▶️ಸಹಜ ಮರಣ ಹೊಂದಿದ ಫಲಾನುಭವಿಗಳ ಅವಲಂಬಿತರಿಗೆ ಅಂತ್ಯ ಸಂಸ್ಕಾರದ ವೆಚ್ಚವೂ ಸೇರಿದಂತೆ ರೂ.25,000/-ಗಳ ಪರಿಹಾರ.
3) ಶೈಕ್ಷಣಿಕ ಧನಸಹಾಯ
▶️ನೋಂದಾಯಿತ ಫಲಾನುಭವಿಯ ಗರಿಷ್ಠ ಇಬ್ಬರು ಮಕ್ಕಳಿಗೆ
• 12ನೇ ತರಗತಿ ಅಥವಾ ತತ್ಸಮಾನ - ವಾರ್ಷಿಕ ತಲಾ ರೂ.3,000/-
• ಪದವಿ ಅಥವಾ ತತ್ಸಮಾನ ವಾರ್ಷಿಕ ತಲಾ ರೂ.5,500/-
* ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ - ವಾರ್ಷಿಕ ತಲಾ ರೂ.8,000/- ಸ್ನಾತಕೋತ್ತರ ಪದವಿ ವಾರ್ಷಿಕ ತಲಾ ರೂ.11,000/-
*ಅಪಘಾತದಿಂದ ನಿಧನರಾದ /ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಯ ಗರಿಷ್ಠ ಇಬ್ಬರು ಮಕ್ಕಳಿಗೆ
*1ನೇ ತರಗತಿಯಿಂದ ಪದವಿ ಅಥವಾ ತತ್ಸಮಾನ – ವಾರ್ಷಿಕ ತಲಾ ರೂ.10,000/- ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ವಾರ್ಷಿಕ ತಲಾ ರೂ.20,000/- ಸ್ನಾತಕೋತ್ತರ ಪದವಿ - ವಾರ್ಷಿಕ ತಲಾ ರೂ.25,000/-
4)ಹೆರಿಗೆ ಭತ್ಯೆ
▶️ಫಲಾನುಭವಿಯ ಮೊದಲ ಎರಡು ಹೆರಿಗೆಗಳಿಗೆ ಮಾತ್ರ ಸೀಮಿತಗೊಂಡಂತೆ ತಲಾ ರೂ.10,000/-ಗಳು,
ಬೇಕಾಗುವ ದಾಖಲೆಗಳು.
1. ಆಧಾರ್ ಕಾರ್ಡ್
2. ರೇಶನ್ ಕಾರ್ಡ್
3. ಬ್ಯಾಂಕ್ ಪಾಸ್ಬುಕ್
4. ಲೈಸನ್ಸ್ ಮತ್ತು ಬ್ಯಾಡ್ಜ್
5. ಪೋಟೋ
6. ಮೊಬೈಲ್ ನಂಬರ್
7. ಕುಟುಂಬದ ಆಧಾರ್ ಕಾರ್ಡ್
0 Comments