Ticker

6/recent/ticker-posts

ಗೃಹಲಕ್ಷ್ಮಿ’ ಮಾದರಿಯಲ್ಲಿ ದೆಹಲಿಯಲ್ಲಿ ‘ಪ್ಯಾರಿ ದೀದಿ ಯೋಜನೆ’ ಡಿಸಿಎಂ ಡಿ ಕೆ ಶಿವಕುಮಾರ್..


 ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ 'ಗೃಹಲಕ್ಷ್ಮಿ ಮಾದರಿಯಲ್ಲಿ ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು.

ದೆಹಲಿ ಪ್ರದೇಶ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, "ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ "ಪ್ಯಾರಿ ದೀದಿ ಯೋಜನೆ" ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ' ಎಂದು ಹೇಳಿದರು.

"ಮೊದಲ ಮೂರು ತಿಂಗಳಲ್ಲಿ ಎಲ್ಲ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್‌ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟೆ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ” ಎಂದರು ಹೇಳಿದರು.

ಮಾಸಿಕ 4-5 ಸಾವಿರ ಉಳಿತಾಯ

"ಗ್ಯಾರಂಟಿ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ. ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಇಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ' ಎಂದು ತಿಳಿಸಿದರು.

Post a Comment

0 Comments