ಬೆಂಗಳೂರು: ಚೀನಾದಲ್ಲಿ ಪತ್ತೆಯಾಗಿರುವ ಹ್ಯೂಮನ್ ಮೆಟಾನ್ಯುಮೊವೈರಸ್ (HMPV) ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ. ಧನಂಜಯ ಟಿ. ಎನ್, ಪ್ರತಿವರ್ಷ ಚಳಿಗಾಲ ಬಂದಾಗ ಶೀತ, ಜ್ವರ ಉಂಟಾಗುವುದು ಸಾಮಾನ್ಯ. ಅದಕ್ಕೆ ವೈರಾಣು ಕಾರಣ ಆಗಿರುತ್ತದೆ. ವೈರಸ್ ಗಳು ಆಗಾಗ ತನ್ನ ಗುಣ ಲಕ್ಷಣಗಳನ್ನು ಬದಲಾಯಿಸುತ್ತಿರುತ್ತದೆ. ಈ ಬಾರಿ ಅದಕ್ಕೆ ಎಚ್ಎಂಪಿವಿ ಎಂದು ಹೆಸರಿಡಲಾಗಿದೆ. ಜ್ವರ, ಶೀತ ಇತ್ತೀಚೆಗೆ ಬಂದವರಿಗೆ ಎಚ್ಎಂಪಿವಿ ಬಂದು ಹೋಗಿರಬಹುದು. ಪರೀಕ್ಷೆ ಮಾಡದ ಕಾರಣ ಇದು ಗೊತ್ತಾಗಿರಲಿಕ್ಕಿಲ್ಲ. ವೈರಸ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ HMPV ಪ್ರಕರಣ ಪತ್ತೆಯಾದ ಹಿನ್ನೆಲೆ ಆರೋಗ್ಯ ಇಲಾಖೆ ಹೊರಡಿಸಿದ ಮಾರ್ಗಸೂಚಿ ಈ ಕೆಳಗಿನಂತಿದೆ.
•ಜನಸಂದಣಿ ಇರುವ ಸ್ಥಳಗಳಿಂದ ದೂರವಿರಿ
•ಕೈಗಳನ್ನು ಸಾಬೂನು ಅಥವಾ ಆಲೋಹಾಲ್ ಆಧಾರಿತ ಸ್ಯಾನಿಟೈಜರ್ನಿಂದ ಹೆಚ್ಚಾಗಿ ತೊಳೆಯಿರಿ
•ಕೆಮ್ಮುವಾಗ ಮತ್ತು ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯ ಪೇಪರ್ ನಿಂದ ಮುಚ್ಚಿಕೊಳ್ಳಿ
•ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಿ
•ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ
•ಕಣ್ಣು ಮೂಗು ಮತ್ತು ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸುವುದನ್ನು ತಪ್ಪಿಸಿ
•ಅನಾರೋಗ್ಯಪೀಡಿತರ ಸಂಪರ್ಕದಿಂದ ದೂರವಿರಿ ಮತ್ತು ಅವರೊಂದಿಗೆ ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳಬೇಡಿ
•ಟಿಮ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಮರುಬಳಕೆ ಮಾಡಬೇಡಿ
•ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ
•ಆರೋಗ್ಯದಲ್ಲಿ ಏರುಪೇರಾದರೆ ವೈದ್ಯರನ್ನು ಸಂಪರ್ಕಿಸಿ ಔಷಧಿಯನ್ನು ಪಡೆಯಿರಿ
0 Comments